ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಂಪುಟ ಸಹೋದ್ಯೋಗಿ ಮನೀಶ್ ಸಿಸೋಡಿಯಾ ಅವರನ್ನು ರೌಸ್ ಅವೆನ್ಯೂ ನ್ಯಾಯಾಲಯವು ಖುಲಾಸೆಗೊಳಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ನ್ಯಾಯಾಲಯವು ದೊಡ್ಡ ಮಟ್ಟದ ನಿರಾಳತೆ ನೀಡಿದೆ. ಇಬ್ಬರೂ ನಾಯಕರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಸಿಬಿಐ (CBI) ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯವು ಅವರನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ನ್ಯಾಯಾಲಯದ ಪ್ರಮುಖ ಅಂಶಗಳು:
ಸಾಕ್ಷ್ಯಾಧಾರಗಳ ಕೊರತೆ: ಕೇಜ್ರಿವಾಲ್ ವಿರುದ್ಧ ಬಲವಾದ ಭೌತಿಕ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ. “ಕೇವಲ ಸಂಚಿನ ಕೇಂದ್ರ ಬಿಂದು ಎಂದು ಆರೋಪಿಸಿದರೆ ಸಾಲದು, ಅದಕ್ಕೆ ಪೂರಕವಾದ ಸಾಕ್ಷ್ಯಗಳಿರಬೇಕು” ಎಂದು ನ್ಯಾಯಾಧೀಶರು ಕಿವಿಮಾತು ಹೇಳಿದ್ದಾರೆ.
ಸಿಸೋಡಿಯಾ ನಿರ್ದೋಷಿ: ಮನೀಶ್ ಸಿಸೋಡಿಯಾ ವಿರುದ್ಧದ ಕ್ರಿಮಿನಲ್ ಉದ್ದೇಶವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ. ಅಬಕಾರಿ ನೀತಿಯಲ್ಲಿನ ಚರ್ಚೆಗಳು ಆಡಳಿತಾತ್ಮಕ ಪ್ರಕ್ರಿಯೆಯ ಭಾಗವಾಗಿದ್ದವೇ ಹೊರತು, ಅವುಗಳಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಸಾಂಸ್ಥಿಕ ಚರ್ಚೆ: ಈ ನೀತಿಯು ಅನೇಕ ಹಂತದ ಸಮಾಲೋಚನೆಗಳ ನಂತರ ಜಾರಿಗೆ ಬಂದಿದ್ದು, ಇದು ವೈಯಕ್ತಿಕ ನಿರ್ಧಾರವಾಗಿರದೆ ಸಾಂಸ್ಥಿಕ ಮಟ್ಟದ ಚರ್ಚೆಯಾಗಿತ್ತು ಎಂಬುದು ದಾಖಲೆಗಳಿಂದ ಸಾಬೀತಾಗಿದೆ.
#WATCH | AAP leader and former Delhi Deputy CM Manish Sisodia arrives at the Rouse Avenue Court for a hearing in Delhi Excise Policy case. pic.twitter.com/Fzhq9vKH23
— ANI (@ANI) February 27, 2026








