ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದು ಅಲ್ಲದೆ ಶವವನ್ನು ಸುಟ್ಟು ಹಾಕಿದ್ದಾನೆ. ಈ ವೇಳೆ ಶವ ಪೂರ್ತಿ ಸುಡದೆ ಅರ್ಧಂಬರ್ಧ ಸುಟ್ಟಿದೆ. ಅರ್ಧಂಬರ್ಧ ಸುಟ್ಟ ಶವದ ಪಕ್ಕದಲ್ಲಿ ಮಲಗಿದ್ದಾನೆ. ಈ ಒಂದು ಘಟನೆ ಚಿಕ್ಕಮಗಳೂರು ತಾಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.
ತಾಯಿ ಭವಾನಿ (55) ಹತ್ಯೆಗೈದ ಪಾಪಿ ಪುತ್ರ ಪವನ್, ನಿರ್ಜನ ಪ್ರದೇಶದಲ್ಲಿ ಇರುವಂತಹ ಒಂಟಿಮನೆಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಯಾವ ಕಾರಣಕ್ಕಾಗಿ ತಾಯಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದಾನೆ? ಅಥವಾ ಈತ ಏನಾದರೂ ಮಾನಸಿಕ ಅಸ್ವಸ್ಥನಾಗಿದ್ದಾನ? ಎಂದು ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ. ಗ್ರಾಮಕ್ಕೆ ಭೇಟಿ ನೀಡಿದ ಪವನ್ ಬಂಧಿಸಿದ ಪೊಲೀಸರು ಆಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.