ರಾಯಚೂರು : ರಾಯಚೂರಿನಲ್ಲಿ ಭೀಕರ ಹತ್ಯೆ ನಡೆದಿದ್ದು, ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆಮಾಡಿರುವ ಘಟನೆ ರಾಯಚೂರು ನಗರದ ಬಂಗಿಕುಂಟದಲ್ಲಿ ನಡೆದಿದೆ.
ರಾಯಚೂರು ನಗರದ ಬಂಗಿಕುಂಟದಲ್ಲಿ ಚಾಕುವಿನಿಂದ ಇರಿದು ಸಯ್ಯದ್ ಖದಿರ್ (40) ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಸತ್ಯನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಕುರಿತು ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.