ಹಾವೇರಿ : ಇಂದು ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ
ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎನ್ನುವ ಗುತ್ತಿಗೆದಾರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಸ್ತಿಯ ವಿಚಾರಕ್ಕೆ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಸಂಬಂಧಿಕರೇ ಶಿವಾನಂದ ಅವರನ್ನು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟಕ ಶಿಗ್ಗಾವಿ ಠಾಣೆ ಪೊಲೀಸ್ರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಕೊಲೆ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.