ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ಯುವಕನ ಕೊಲೆ ಮಾಡಿ ಶವ ಎಸೆದು ಹೋಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಪೀಣ್ಯದ ಪಂಚಮುಖ ಲೇಔಟ್ ಬಳಿ ಯುವಕನ ಶವ ಪತ್ತೆಯಾಗಿದ್ದು, ಮೃತ ಯುವಕನ ಮುಖ, ದೇಹ, ಕೈಗಳ ಮೇಲೆ ಹಲ್ಲೆ ಮಾಡಿರುವ ಗುರುತುಗಳ ಪತ್ತೆಯಾಗಿದೆ.
ಯುವಕನನ್ನು ಬೇರೆಡೆ ಕೊಲೆ ಮಾಡಿ ಲೇಔಟ್ ಬಳಿ ತಂದು ಬೀಸಾಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.