ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಬುಧವಾರ ಭಯೋತ್ಪಾದಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಜವಾನ್ ಗಾಯಗೊಂಡಿದ್ದಾರೆ
ಕನಾಚಕ್ ಪ್ರದೇಶದಲ್ಲಿ ಬುಧವಾರ ಮುಂಜಾನೆ 2: 35 ರ ಸುಮಾರಿಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಈ ಪ್ರದೇಶದ ಸೈನಿಕರು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಅಧಿಕೃತ ಹೇಳಿಕೆಯಲ್ಲಿ, ಸೆಪ್ಟೆಂಬರ್ 11 ರಂದು ಬೆಳಿಗ್ಗೆ 02: 35 ರ ಸುಮಾರಿಗೆ, ಗಡಿಯುದ್ದಕ್ಕೂ ಅಖ್ನೂರ್ ಪ್ರದೇಶದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಯಿತು, ಇದಕ್ಕೆ ಬಿಎಸ್ಎಫ್ ಸೂಕ್ತವಾಗಿ ಪ್ರತಿಕ್ರಿಯಿಸಿತು. ಪಾಕ್ ಗುಂಡಿನ ದಾಳಿಯಲ್ಲಿ ಓರ್ವ ಬಿಎಸ್ಎಫ್ ಯೋಧ ಗಾಯಗೊಂಡಿದ್ದಾರೆ. ಸೈನಿಕರು ಕಟ್ಟೆಚ್ಚರ ವಹಿಸಿದ್ದಾರೆ
 
		



 




