ಬೀದರ್ : ಸದ್ಯ ರಾಜ್ಯದಲ್ಲಿ ಮುಡಾ ಹಗರಣ ಭಾರಿ ಸಂಚಲನ ಸೃಷ್ಟಿಸಿದ್ದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಪತ್ನಿ ಪಾರ್ವತಿ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಹಲವರನ್ನು ಈಗಾಗಲೇ ಇಡಿ ಹಾಗೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇದರ ಬೆನ್ನಲ್ಲೆ ಇದೀಗ ಬೀದರ್ ನಲ್ಲಿ ಬುಡಾದ ಕಮಿಷನರ್ ಶ್ರೀಕಾಂತ್ ಚಿಮಕೋಡೆ 10 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಹೌದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಆಗಿರುವ ಶ್ರೀಕಾಂತ್ ಚಿಮಾಕೋಡೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೇಔಟ್ ನಿರ್ಮಾಣಕ್ಕೆ ಅನುಮತಿ ನೀಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ವೇಳೆ 40 ಲಕ್ಷ ಲಂಚ ನೀಡುವಂತೆ ಬುಡಾ ಕಮಿಷನರ್ ಶ್ರೀಕಾಂತ್ ಚಿಮಕೋಡೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಸಿದ್ದು ಹೂಗಾರ್ ಎನ್ನುವ ವ್ಯಕ್ತಿಯ ಬಳಿ 40 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದೀಗ ಇಂದು 10 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಶ್ರೀಕಾಂತ್ ಚಿಮಕೋಡೆ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ. ಸದ್ಯ ಶ್ರೀಕಾಂತ್ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.








