Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತೈಲ ಉಳಿತಾಯಕ್ಕೆ ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ: ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : ಕೇಂದ್ರದಿಂದ ತೆರಿಗೆದಾರರಿಗೆ ಬಂಪರ್ ಗಿಫ್ಟ್ : 12 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆ!
INDIA

BUDGET BREAKING : ಕೇಂದ್ರದಿಂದ ತೆರಿಗೆದಾರರಿಗೆ ಬಂಪರ್ ಗಿಫ್ಟ್ : 12 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆ!

By ಸುರೇಶ್‌

ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ಕೇಂದ್ರ ಬಜೆಟ್ ನಲ್ಲಿ ತೆರಿಗೆದಾರರಿಗೆ ಭರ್ಜರಿ ಗಿಫ್ಟ್ ನೀಡಿದೆ. 12, ಲಕ್ಷದ ವರೆಗೆ ಆದಾಯ ತೆರಿಗೆ ಇಲ್ಲ. 12 ಲಕ್ಷದ ವರೆಗೆ ತೆರಿಗೆಯಲ್ಲಿ  ಕೇಂದ್ರ ಸರ್ಕಾರ ದೊಡ್ಡ ವಿನಾಯಿತಿ ನೀಡಿದೆ. ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ಬಂಪರ್ ಗಿಫ್ಟ್ ನೀಡಿದೆ. ಆದಾಯ ತೆರಿಗೆದಾರರಿಗೆ ಬಜೆಟ್ ನಲ್ಲಿ ಬಂಪರ್ ಗಿಫ್ಟ್ ನೀಡಲಾಗಿದೆ. 12 ಲಕ್ಷದವರೆಗೂ ಯಾವುದೇ ತೆರಿಗೆ ಇಲ್ಲ.

ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ.ರಾಜ್ಯಗಳಿಗೆ 1.5 ಲಕ್ಷ ಕೋಟಿಯವರೆಗೆ ಬಡ್ಡಿ ರಹಿತ ಸಾಲ ವಿಮಾಕ್ಷೇತ್ರದಲ್ಲಿ ನೂರರಷ್ಟು ವಿದೇಶಿ ಹೂಡಿಕೆಗೆ ಅವಕಾಶ ವಿದೇಶಿ ಹೂಡಿಕೆ ಶೇಕಡ 74 ರಿಂದ ಶೇಕಡ 100ಕ್ಕೆ ಹೆಚ್ಚಳ ಮಾಡಲಾಗಿದೆ.

ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

“ಎಲ್ಲಾ MSME ಗಳ ವರ್ಗೀಕರಣಕ್ಕಾಗಿ ಹೂಡಿಕೆ ಮತ್ತು ವಹಿವಾಟು ಮಿತಿಗಳನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸಲಾಗುವುದು. ಇದು ನಮ್ಮ ಯುವಕರಿಗೆ ಬೆಳೆಯಲು ಮತ್ತು ಉದ್ಯೋಗ ಸೃಷ್ಟಿಸಲು ಅವರಿಗೆ ವಿಶ್ವಾಸವನ್ನು ನೀಡುತ್ತದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಶಾಲೆಗಳಲ್ಲಿ ಲ್ಯಾಬ್ ಸ್ಥಾಪನೆ ಸಕ್ಷಮ್ ಅಂಗನವಾಡಿಗಳಲ್ಲಿ ಯೋಜನೆ ಜಾರಿಗೆ ತರಲಾಗುವುದು.

MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. ಕ್ರೆಡಿಟ್ ಪ್ರವೇಶವನ್ನು ಸುಧಾರಿಸಲು MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. “ಕ್ರೆಡಿಟ್ ಗ್ಯಾರಂಟಿ ಕವರ್ ಅನ್ನು ₹20 ಕೋಟಿಗೆ ದ್ವಿಗುಣಗೊಳಿಸಲಾಗುವುದು, ಗ್ಯಾರಂಟಿ ಶುಲ್ಕವನ್ನು 1% ಗೆ ಇಳಿಸಲಾಗುವುದು” ಎಂದು ಅವರು ಹೇಳುತ್ತಾರೆ.

ಜಿಲ್ಲಾ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಮುಂದಿನ 3 ವರ್ಷಗಳಲ್ಲಿ 300 ಕೇಂದ್ರಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸ್ಟಾರ್ಟ್ ಅಪ್ ಕಂಪನಿಗಳಿಗೆ 10 ಕೋಟಿಯಿಂದ 20 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರ ಉತ್ತೇಜನಕ್ಕೆ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಇದರಿಂದ 22 ಲಕ್ಷ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಕೇಂದ್ರ ಸರ್ಕಾರ ಹೊಸ ಯೋಜನೆ ಘೋಷಿಸಿದ್ದು, ಇದರಿಂದ 1 ಕೋಟಿ ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.ಜಲ ಜೀವನ್ ಮಿಷನ್ ಅನ್ನು 2028 ರವರೆಗೆ ವಿಸ್ತರಿಸುವುದಾಗಿ ಘೋಷಿಸಲು ನನಗೆ ಸಂತೋಷವಾಗಿದೆ, ಒಟ್ಟು ವೆಚ್ಚವನ್ನು ಹೆಚ್ಚಿಸಲಾಗಿದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಐಐಟಿ ,ಐಐಎಫ್ ಸಿಗಳಿಗೆ ಅನುದಾನ ಹೆಚ್ಚಳ ಮಾಡಲಾಗುವುದು. ಆಹಾರ ಭದ್ರತೆಗೂ ಅನುದಾನ ಹೆಚ್ಚಳ, ನಗರಾಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಅನುದಾನ ನೀಡಲಾಗುವುದು.”ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ತೈಲ ಉಳಿತಾಯಕ್ಕೆ ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ: ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’

2 Mins Read

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಚುನಾವಣಾ ಆಯೋಗ ಆದೇಶ

2 Mins Read

BIG BREAKING: ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ 3ನೇ ಹಂತದ ‘SIR’ ಜಾರಿ: ಚುನಾವಣಾ ಆಯೋಗದ ಮಹತ್ವದ ನಿರ್ಧಾರ | ECI SIR

1 Min Read
Recent News

BREAKING : ತೈಲ ಉಳಿತಾಯಕ್ಕೆ ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ: ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

BREAKING: ಮೇ.24ರಂದು ನಿಗದಿಯಾಗಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

State News
KARNATAKA

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಗ್ರಾಹಕರ ನಿದ್ದೆಗೆಡಿಸಿದೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚಿನ್ನ…

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

BREAKING: ಮೇ.24ರಂದು ನಿಗದಿಯಾಗಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

‘ಇವನ್ಯಾವನೋ ಬಿಸಿಲಲ್ಲಿ ಎಳೆನೀರು ತರಬೇಕಲ್ವಾ?’ : ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.