ಕಲಬುರ್ಗಿ : ತಡರಾತ್ರಿ ಕಲಬುರ್ಗಿಯಲ್ಲಿ ಬಸ್ ಹಾಗು ಟ್ಯಾಂಕರ್ ನಡುವೆ ಬೀಕರವಾದ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಬಸ್ ನಲ್ಲಿ ಇದ್ದಂತಹ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಬಸ್ ಚಾಲಕ ಸೇರಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಡ್ರಾಮಿ ಪಟ್ಟಣ ಹೊರವಲಯದಲ್ಲಿ ನಡೆದಿದೆ.
ತಡರಾತ್ರಿ ಈ ಒಂದು ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಜೇವರ್ಗಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.ಬಸ್ ಚಾಲಕನಿಗೆ ಮತ್ತು ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಯಡ್ರಾಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.