ಬೆಂಗಳೂರು : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಎರಡು ಮಹಾನಗರ ಪಾಲಿಕೆ ರಚಿಸಲು ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಣಯ ಕೈಗೊಳ್ಳಲಾಗಿದೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸಲಾಗಿದೆ.
ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವುದರಿಂದ, 2014ರಲ್ಲಿಯೇ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಒತ್ತಾಯ ಕೇಳಿ ಬಂದಿತ್ತು.ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಬಗ್ಗೆ ಘೋಷಣೆ ಮಾಡಲಾಗಿದ್ದು, ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮಾಚರಣೆ ನಡೆಸಲಾಗಿದೆ.