ಬೆಂಗಳೂರು : ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೈಲರ್ಜಿಗೆ ಏರಿಸಲು ಇಂದು ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್ಚಿಗೆ ಪಾಟೀಲ್ ತಿಳಿಸಿದರು.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್ ಅವರು ಹಾಸನದ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೈಲ್ದರ್ಜೆಗೆ ಏರಿಸಲು ಸಂಪುಟದಲ್ಲಿ ಅನುಮೋದನೆ ದೊರಕಿದೆ ಎಂದರು.
ಅಲ್ಲದೆ ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಕಳೆದ ಕೆಲವು ದಿನಗಳ ಹಿಂದೆ ರಾಯಚೂರಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ರಾಯಚೂರು ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿಯವರ ನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ನಡೆದ ಸಂಪುಟದಲ್ಲಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ನಾಮಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂದು ಎಚ್ ಕೆ ಪಾಟೀಲ್ ತಿಳಿಸಿದರು.