ಬಳ್ಳಾರಿ : ಯಾವುದೇ ಕ್ಷಣದಲ್ಲಿ ಆದರೂ ಸಚಿವ ಸಂಪುಟ ವಿಸ್ತರಣೆಯಾಗಲಿದೆ. 10 ದಿನಗಳಲ್ಲಿ ಬಿ.ನಾಗೇಂದ್ರ ಮತ್ತೆ ಸಚಿವರಾಗಲಿದ್ದಾರೆ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾವುದೇ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆ ಆಗಬಹುದು. ನಮ್ಮ ಕೈಯಲ್ಲಿ ನಿರ್ಧಾರ ಇಲ್ಲ. ಹೈಕಮಾಂಡ್ ನೋಡಿಕೊಳ್ಳಲಿದೆ ಎಂದರು. ಬಿ.ನಾಗೇಂದ್ರ ಮತ್ತೆ ಸಚಿವರಾಗುತ್ತಾರೆ. 10 ದಿನಗಳಲ್ಲಿ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ಸಿಗಲಿದೆ. ಸಿದ್ಧರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂದರು.
ಬಳ್ಳಾರಿ ಜಿಲ್ಲೆಯಲ್ಲಿ ಯಾವ ಕೆಲಸಗಳು ಪೆಂಡಿಂಗ್ ಉಳಿದಿಲ್ಲ. ಎಲ್ಲಾ ಕೆಲಸ ಕಾರ್ಯಗಳು ನಡೆಯುತ್ತಿವೆ. ನಾಗೇಂದ್ರ ಮೂಲಕ ಸಮಸ್ಯೆಗಳ ಬಗ್ಗೆ ನನಗೆ ಮಾಹಿತಿ ಬರ್ತಿದೆ. ಸಾಹಿತ್ಯ ಸಮ್ಮೇಳನ ನಡೆಸಲು ನಾಲ್ಕು ಸ್ಥಳ ಗುರುತಿಸಲಾಗಿದೆ. ಬಳ್ಳಾರಿ ಶಾಸಕರೊಂದಿಗೆ ಸೇರಿ ಸ್ಥಳ ಪರಿಶೀಲನೆ ಮಾಡುತ್ತೇನೆ. ಬಳ್ಳಾರಿಯಲ್ಲಿ ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು.