ಮಂಡ್ಯ : ನವೆಂಬರ್ ಗೆ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಲ್ಲರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ ಸೀನಿಯರ್ಗಳು ಇದ್ದಾರೆ ಅವರಿಗೆಲ್ಲ ಮಂತ್ರಿ ಆಸೆ ಇದೆ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದು ಹೈಕಮಾಂಡ್ಗೆ ಬಿಟ್ಟಿದ್ದು ಎಂದು ವಸತಿ ಸಭಾ ಜಮೀರ್ ಅಹ್ಮದ್ ಖಾನ್ ಸಚಿವ ಸಂಪುಟ ಪುನಾರಚನೆ ಕುರಿತು ಮಹತ್ವದ ಸುಳಿವು ನೀಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿರುವ ಸಂಸದ ಎಲ್ ಆರ್ ಶಿವರಾಮೇಗೌಡ ಹಾಗೂ ಶಾಸಕ ಡಾ.ರಂಗನಾಥ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದ್ದು ಇದರ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಬಯಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.ಡಿಕೆ ಶಿವಕುಮಾರ್ ಗು ಮುಖ್ಯಮಂತ್ರಿ ಆಗಬೇಕು ಅನ್ನುವ ಆಸೆ ಇದೆ ಹಾಗಾಗಿ ಅವರು ಸಹ ಸಿಎಂ ಆಗಬೇಕು ಅಂತ ನಾನು ಬಯಸುತ್ತೇನೆ ಐದು ವರ್ಷ ಸಿಎಂ ಸಿದ್ದರಾಮಯ್ಯ ಅವಧಿ ಪೂರೈಸುತ್ತಾರೆ ಎಂದಿದ್ದಾರೆ.