ನವದೆಹಲಿ : ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಇಲ್ಲ. ಸಿಎಂ ಸಿದ್ದರಾಮಯ್ಯ ದೆಹಲಿಗೆ ಬರುತ್ತಿದ್ದಾರೆ. ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಅನುಮತಿ ಕೇಳುತ್ತಿದ್ದೇವೆ, ದೆಹಲಿಯಲ್ಲಿ ಇಂದು ಜಲಶಕ್ತಿ ಸಚಿವರನ್ನ ಭೇಟಿ ಮಾಡುತ್ತೇವೆ. ರಾಜ್ಯದ ನೀರಾವರಿ ಯೋಜನೆ ಬಗ್ಗೆ ಮಾಹಿತಿ ನೀಡಿ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.