ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ.
ಇಂದು ಕೇಂದ್ರ ಸಂಪುಟ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಅನೇಕ ಯೋಜನೆಗಳು ಮತ್ತು ಹೊಸ ಯೋಜನೆಗಳಿಗೆ ಹಣವನ್ನು ಚರ್ಚಿಸುವ ಸಾಧ್ಯತೆಯಿದೆ. ಹೊಸ ವರ್ಷದಲ್ಲಿ ಕೇಂದ್ರ ಸಚಿವ ಸಂಪುಟದ ಮೊದಲ ಸಭೆ ಮಹತ್ವ ಪಡೆದುಕೊಂಡಿದೆ.