ಬೆಂಗಳೂರು : ಬೆಂಗಳೂರಿನ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಇದೀಗ ಶಂಕಿತ ಉಗ್ರನ ಮತ್ತೊಂದು ಫೋಟೋ ವೈರಲ್ ಆಗಿದ್ದು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಫೋಟೋ ಇದೀಗ ಸಿಸಿಟಿವಿ ಕ್ಯಾಮೆರಾ ದೃಶ್ಯದಲ್ಲಿ ಸೆರೆಯಾಗಿದೆ.
ಮಾರ್ಚ್ 1 ರಂದು 11:45 ನಿಮಿಷಕ್ಕೆ ಈ ಆರೋಪಿ ಬಿಎಂಟಿಸಿ ಬಸ್ ಹತ್ತಿದ್ದಾನೆ. ಬಸ್ನಲ್ಲಿದ್ದ ಸಿಸಿ ಕ್ಯಾಮೆರಾ ನೋಡಿದ ಶಂಕಿತ ಉಗ್ರ ಬಸ್ಸಿನ ಸಿ ಸಿ ಕ್ಯಾಮೆರಾದಿಂದ ತಪ್ಪಿಸಿಕೊಳ್ಳಲು ಶಂಕಿತ ಉಗ್ರ ಕಳ್ಳಾಟ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಜನರು ಗಾಯಗೊಂಡಿದ್ದಾರೆ.ಎನ್ ಐಎ ಫೋನ್ ಸಂಖ್ಯೆಗಳು ಮತ್ತು ಇಮೇಲ್ಗಳನ್ನು ಹಂಚಿಕೊಂಡಿದೆ, ಅಲ್ಲಿ ಜನರು ಪ್ರಮುಖ ಶಂಕಿತರಾಗಿ ಹೊರಹೊಮ್ಮಿದ ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ಕಳುಹಿಸಬಹುದು. ಮಾಹಿತಿದಾರರ ಗುರುತನ್ನು ಗೌಪ್ಯ ವಾಗಿಡಲಾಗುವುದು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಭರವಸೆ ನೀಡಿದೆ.