ವಿಜಯನಗರ : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯ ನಗರದ ಹೊಸಪೇಟೆಯಲ್ಲಿ ಮಾತನಾಡಿ ಆರೋಪಿಯ ಸುಳಿವು ಸಿಕ್ಕಿದ್ದು ಶೀಘ್ರದಲ್ಲಿ ಆತನನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರಲ್ಲಿ ನೀರಿಗಾಗಿ ಹಾಹಾಕಾರ : ಪ್ರತಿ ಕ್ಷೇತ್ರಕ್ಕೆ ’10 ಕೋಟಿ’ ಬಿಡುಗಡೆ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆರೋಪಿಯ ಬಗ್ಗೆ ಸಿಕ್ಕಿದ್ದು ಎರಡು ಮೂರು ದಿನಗಳಲ್ಲಿ ಬಂದಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಪ್ರಕರಣವನ್ನು ಸಿಸಿಬಿಗೆ ವಹಿಸಿದ್ದೇವೆ.ಸಿಸಿಬಿ ಅವರು ಪ್ರಕರಣದ ತನಿಖೆಯನ್ನು ಸಮರ್ಥವಾಗಿ ಕೈಗೊಳ್ಳುತ್ತಾರೆ ಆದ್ದರಿಂದ ಸಿಸಿಬಿಗೆ ವಹಿಸಿದ್ದೇವೆ. FSL ವರದಿ ಕುರಿತು ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ನೀವು ಮೊಬೈಲ್ ನಲ್ಲಿ ರೀಲ್ಸ್‌ಗಳನ್ನು ನೋಡುತ್ತಿದ್ದೀರಾ? ಇದು ನಿಮ್ಮ ಆರೋಗ್ಯ ಮತ್ತು ಭವಿಷ್ಯಕ್ಕೆ ಅಪಾಯಕಾರಿಯಂತೆ!
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಸಿಎಂ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಸಿಎಂ ಸಿದ್ದರಾಮಯ್ಯಗೆ ಸಚಿವ ನಾಗೇಂದ್ರ ಶಾಸಕ ಸಾಥ್ ನೀಡಿದರು.
ಸಿಗದ ನೇಮಕಾತಿ ಪತ್ರ, ಸತ್ಯಾಗ್ರಹಕ್ಕೆ ಮುಂದಾದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು!