ಕಲಬುರ್ಗಿ : ಕಲ್ಬುರ್ಗಿಯಲ್ಲಿ ಇಂದು ಕಟ್ಟಡದ ಮಹಡಿಯಲ್ಲಿರುವ ಕೆಫೆ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಖರ್ಗೆ ಸರ್ಕಲ್ ಬಳಿ ಇರುವ ಕಟ್ಟಡ ಒಂದರಲ್ಲೇ ಮೂರನೆ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ.
ಖರ್ಗೆ ಸರ್ಕಲ್ ಬಳಿ ಇರುವ ಕಟ್ಟಡ ಒಂದರಲ್ಲಿ ಕಾಫಿಜಾ ಕೆಫೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಟ್ಟಡವನ್ನು ಆವರಿಸಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.