ಬೆಂಗಳೂರು : ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್.22ರ ನಾಳೆ ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ, ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದೇವೆ. ಶನಿವಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಇಲ್ಲ, ಗೃಹ ಇಲಾಖೆ ಜೊತೆ ಚರ್ಚಿಸಿ ರಜೆ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇವೆ. ಬಂದ್ ಗೆ ಸಾರಿಗೆ ಬೆಂಬಲ ಕೊಟ್ಟರೆ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ನೀತಿ ವಿರೋಧಿಸಿ ಹಾಗೂ ಚಾಲಕರಿಗೆ ಶಕ್ತಿ ತುಂಬಲು ದಿನಾಂಕ 22-03-2025ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.