ಮಂಡ್ಯ : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಇಂದು ಹಿಂದೂಪರ ಸಂಘಟನೆಗಳು ಮದ್ದೂರು ಪಟ್ಟಣ ಬಂದ್ ಗೆ ಕರೆ ಕೊಟ್ಟಿವೆ.
ಮಂಡ್ಯ ಜಿಲ್ಲೆಯ ಮದ್ದೂರು ಬಂದ್ ಗೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ, ಹಿಂದೂ ರಕ್ಷಣಾ ಸಮಿತಿಗಳು ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಮದ್ದೂರು ಬಂದ್ ಗೆ ವರ್ತಕರು ಬೆಂಬಲ ಸೂಚಿಸಿದ್ದಾರೆ.
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರನ್ನು ಗಡಿಪಾರು ಮಾಡಬೇಕು. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಕೆಲವೇ ಹೊತ್ತಿನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಮೆರವಣಿಗೆ ಆರಂಭವಾಗಲಿದೆ.