ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ಸುಪ್ರೀಂಕೋರ್ಟ್ ದರ್ಶನ್, ಪವಿತ್ರಾಗೌಡ & ಗ್ಯಾಂಗ್ ನ ಜಾಮೀನು ರದ್ದು ಮಾಡಿದ್ದು, ಪವಿತ್ರಾಗೌಡ ಕಣ್ಣೀರು ಹಾಕಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಟ ದರ್ಶನ್ ಪವಿತ್ರಾಗೌಡ ಹಾಗೂ ಗ್ಯಾಂಗ್ ಗೆ ಬಿಗ್ ಶಾಕ್ ನೀಡಿದೆ. ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿ ತೀರ್ಪು ಪ್ರಕಟಿಸಿದ್ದು, ನಟ ದರ್ಶನ್ನನ್ನು ತಕ್ಷಣವೇ ಅರೆಸ್ಟ್ ಮಾಡಿ ಎಂದು ಸುಪ್ರೀಂಕೋರ್ಟ್ ಆದೇಶಿದೆ. ಈ ಹಿನ್ನೆಲೆ ದರ್ಶನ್ಗೆ ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ.
ಜಾಮೀನು ರದ್ದಾಗಿರುವ ವಿಷಯ ತಿಳಿಯುತ್ತಿದ್ದಂತೆ ಪವಿತ್ರಾ ಗೌಡ ಕಣ್ಣೀರಿಟ್ಟಿದ್ದಾರೆ. ತಮ್ಮ ರೆಡ್ ಕಾರ್ಪೆಟ್ ಸೆಂಟರ್ ಗೆ ಹೋಗಲು ರೆಡಿಯಾಗುತ್ತಿದ್ದ ಅವರನ್ನು ಪೊಲೀಸರು ಹೊರ ಹೋಗದಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ತಮ್ಮ ಜವಾಬ್ದಾರಿಗಳನ್ನು ಬೇರೆಯವರಿಗೆ ಹಸ್ತಾಂತರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಮಾಖ್ಷಿ ಪಾಳ್ಯ ಠಾಣೆ ಪೊಲೀಸರು ಅಲರ್ಟ್ ಇದ್ದು, ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಬಂಧನಕ್ಕೆ ಸಿದ್ಧತೆ ನಡೆಸಲಾಗಿದೆ. ಎಲ್ಲಾ ಆರೋಪಿಗಳ ಚಲನವಲನ ಬಗ್ಗೆ ನಿಗಾ ಇಡಲು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಆರೋಪಿಗಳನ್ನು ಅರೆಸ್ಟ್ ಮಾಡಿ ಕೋರ್ಟ್ ಗೆ ಹಾಜರುಪಡಿಸಲು ಸಿದ್ಧತೆ ನಡೆಸಲಾಗಿದೆ.
ನ್ಯಾ.ಆರ್. ಮಹಾದೇವನ್ ತೀರ್ಪು ಓದಿ, ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಹೇಳಿ ಜಾಮೀನು ರದ್ದುಗೊಳಿಸಿದರು. ಕಳೆದ ವಿಚಾರಣೆಯ ವೇಳೆ ನಟ ದರ್ಶನ್ ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರು ಸುಧೀರ್ಘವಾಗಿ ವಾದ ಮಂಡನೆ ಮಾಡಿದ್ದರು. ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡುವಾಗ ದರ್ಶನ್ ಸ್ಥಳದಲ್ಲಿ ಇದ್ದಿದ್ದು, ರೇಣುಕಾ ಸ್ವಾಮಿ ಹಲ್ಲೆ ಮಾಡಿರುವ ವಿಡಿಯೋ ಮಾಡಿದ್ದು, ಹಾಗೂ ಬಟ್ಟೆಯ ಮೇಲೆ ರಕ್ತದ ಕಲೆಗಳು ಸೇರಿದಂತೆ ಎಲ್ಲಾ ಸಾಕ್ಷಿಗಳನ್ನು ಸರ್ಕಾರದ ಪರ ವಕೀಲರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮುಂದೆ ವಿವರಿಸಿದ್ದರು.
ಇಂದು ವಾದ ಪ್ರತಿವಾದಗಳನ್ನು ಸಂಪೂರ್ಣವಾಗಿ ಆಲಿಸಿದ ಬಳಿಕ, ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು, ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ ಈ ಹಿನ್ನೆಲೆಯಲ್ಲಿ ನಟ ದರ್ಶನ್ ಮತ್ತೆ ಪರಪ್ಪನ ಅಗ್ರಹಾರ ಜೈಲೇ ಫಿಕ್ಸ್ ಎಂಬಂತಾಗಿದೆ.