ಬೆಂಗಳೂರು : ಇತ್ತೀಚಿಗೆ ಉತ್ತರ ಭಾರತದಿಂದ ಕರ್ನಾಟಕಕ್ಕೆ ವಲಸೆ ಬಂದಿರುವವರಿಂದ ಕನ್ನಡದವರ ಮೇಲೆನೆ ದೌರ್ಜನ್ಯ ನಡೆಸಿರುವ ಪ್ರಕರಣಗಳು ನಡೆದಿದ್ದು, ಅದರಲ್ಲೂ ಉತ್ತರ ಪ್ರದೇಶ, ಬಿಹಾರ, ಗುಜರಾತ್ ಇತರೆ ರಾಜ್ಯಗಳಿಂದ ಬಂದಂತಹ ಉತ್ತರ ಭಾರತದ ಜನ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದ್ದು, ಕನ್ನಡಿಗ ಆಟೋ ಚಾಲಕನಿಗೆ ಹಿಂದಿ ಕಲಿ ಎಂದು ಧಮ್ಕಿ ಹಾಕಿರುವ ಘಟನೆ ನಡೆದಿದೆ.
ಹೌದು ಬೆಂಗಳೂರಿನ ಎಸ್‌ಎಂಎಸ್ ಆರ್ಕೇಡ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಓರ್ವ ಆಟೋ ಚಾಲಕನಿಗೆ ಧಮ್ಕಿ ಹಾಕಿದ್ದಾನೆ. ಕನ್ನಡಿಗ ಆಟೋ ಚಾಲಕನಿಗೆ ಹಿಂದಿಯಲ್ಲಿ ಮಾತನಾಡು ಎಂದು ಹಿಂದಿ ಭಾಷಿಕ ಧಮ್ಕಿ ಹಾಕಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಹಿಂದಿಯಲ್ಲಿ ಮಾತನಾಡು ಎಂದು ಯುವಕ ಧಮ್ಕಿ ಹಾಕಿದ್ದಕ್ಕೆ ಆಟೋ ಚಾಲಕ ಏನೂ ಮಾಡಕ್ಕಾಗಲ್ಲ. ಕನ್ನಡ ಮಾತನಾಡು ಕಲಿ ನೀನು. ನೀನು ಬೆಂಗಳೂರಿಗೆ ಬಂದಿರುವುದು ಆಯ್ತಾ ಎಂದು ತಿರುಗೇಟು ಕೊಡುತ್ತಾನೆ. ಇದನ್ನು ಒಬ್ಬಾತ ವಿಡಿಯೋ ಮಾಡುತ್ತಿದ್ದರೆ, ಮತ್ತೊಬ್ಬ ಮಹಿಳೆ ಹಿಂದಿ ಭಾಷಿಕ ಯುವಕನನ್ನು ಹಿಡಿದೆಳೆದು ಅತ್ತ ಕರೆದೊಯ್ದಿದ್ದಾಳೆ.
Does any one know who is that arrogant guy in this video and where does he work in Bengaluru ?
This BIMARU guy does not deserve to be in Karnataka. https://t.co/ptJLh7F4v8
— PLE Karnataka (@PLEKarnataka) April 19, 2025