ಬೆಂಗಳೂರು : ರಾಮನಗರದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ರಸ್ತೆಯಲ್ಲೇ ಕಾರೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೌದು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕಾರೋಂದು ಹೊತ್ತಿ ಉರಿದಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿ ಸಮೀಪ ಶೇಷಗಿರಿ ಟೋಲ್ ಬಳಿ ಈ ಒಂದು ಘಟನೆ ನಡೆದಿದೆ. ಬಿಡದಿ ಬಳಿ ಇರುವ ಟೋಲ್ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಕಾರು ಒಂದು ಹೊತ್ತಿ ಉರಿದಿದೆ. ಕೂಡಲೇ ಕಾರಿನಲ್ಲಿದ್ದ ಕುಟುಂಬಸ್ಥರು ಕೆಳಗೆ ಇಳಿದಿದ್ದಾರೆ. ಘಟನಾ ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಾರು ಹೊತ್ತಿ ಉರಿದಿದ್ದರಿಂದ ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.