ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ದುಷ್ಕರ್ಮಿಗಳು ಕಾರು ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಬೆಂಗಳೂರಿನ ಮೈಸೂರು ರಸ್ತೆಯ ಬಾಪೂಜಿನಗರದಲ್ಲಿ ಕಾರು ಚಾಲಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಕೊಲೆಯಾದ ಯುವಕನನ್ನ ಕೌಶಿಕ್ (25) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಕೌಶಿಕ್ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.