ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಮುಂಡಿ ಬೆಟ್ಟಕ್ಕೆ ಬಂದಿದ್ದ ಬೆಂಗಳೂರು ಮೂಲದ ಕಾರು ಒಂದು ವಾಪಸ್ ಆಗುವ ವೇಳೆ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಟ್ಟಿಯಾಗಿರುವಾಗ ಘಟನೆ ನಡೆದಿದೆ.
ಹೌದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ. ಚಾಮುಂಡಿ ಬೆಟ್ಟದಿಂದ ವಾಪಾಸ್ ಆಗುವಾಗ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಚಾಮುಂಡೇಶ್ವರಿ ದರ್ಶನಕ್ಕೆ ಕುಟುಂಬ ಆಗಮಿಸಿತ್ತು. ಅಪಘಾತದ ಕುರಿತು ಸಿದ್ದಾರ್ಥ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.