ಬೆಂಗಳೂರು : ಬೆಂಗಳೂರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ. ನೆಲಮಂಗಲದ ಕುಣಿಗಲ್ ಬೈಪಾಸ್ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕುಣಿಗಲ್ ಬೈಪಾಸ್ ನಲ್ಲಿ ರಸ್ತೆ ಮಧ್ಯ ದೊಡ್ಡ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ.
ಕಾರಿನಲ್ಲಿದ್ದ 6 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪವಾಡಸದೃಶ ರೀತಿಯಲ್ಲಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಆರು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.