ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ವಿಮಾನ ನಿಲ್ದಾಣ ಪ್ರಾಧಿಕಾರದ ಕಟ್ಟಡ ಉದ್ಘಾಟನೆಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ತೆರಳಿದ್ದರು. ಈ ಒಂದು ಕಾರ್ಯಕ್ರಮದ ಬಳಿಯೇ ಕಾರು ಒಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಡಿಸಿಎಂ ಡಿಕೆ ಶಿವಕುಮಾರ್ ಅವರು ದೇವನಹಳ್ಳಿ ಬಳಿ ಇರುವ ವಿಮಾನ ನಿಲ್ದಾಣ ಪ್ರಾಧಿಕಾರದ ಕಟ್ಟಡ ಉದ್ಘಾಟನೆಗೆ ತೆರಳಿದ್ದರು. ಇದೇ ವೇಳೆ ಕಾರ್ಯಕ್ರಮದ ವೇದಿಕೆಯ ಸಮೀಪವೇ ಕಾರು ಹೊತ್ತಿ ಉರಿದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಅಂಬಿಕಾಲೇಔಟ್ ನಲ್ಲಿ ಕಾರು ಆಕಸ್ಮಿಕವಾಗಿ ಹೊತ್ತಿ ಉರಿದಿದೆ. ತಕ್ಷಣಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಿದ್ದಾರೆ.








