ಬೆಂಗಳೂರು : ನಟಿ ರಮ್ಯಾ ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಸಿಸಿಬಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ನಟಿ ರಮ್ಯಾ ಗೆ ಮೆಸೇಜ್ ಮಾಡಿದ್ದ ಒಟ್ಟು 48 ಜನರ ಐಪಿ ಅಡ್ರೆಸ್ ಗಳನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ ಇದುವರೆಗೂ ಒಟ್ಟು 15 ಜನರನ್ನು ಗುರುತಿಸಿದ್ದು, ನಾಲ್ವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು ಮಾಜಿ ಸಂಸದೆ ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಮಾಡಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ ಒಟ್ಟು 48 ಜನರ ಐಪಿ ಅಡ್ರೆಸ್ ಅನ್ನು ಸಿಸಿಬಿ ತಂಡ ಇದೀಗ ಪತ್ತೆ ಹಚ್ಚಿದೆ. ಈ ಬಗ್ಗೆ 15 ಜನರನ್ನು ಗುರುತಿಸಲಾಗಿದ್ದು ನಾಲ್ವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಶ್ಲೀಲವಾಗಿ ಪೊಲೀಸರು ಕಮೆಂಟ್ ಮಾಡಿದವರಿಗೆ ಇದೀಗ ಬಿಸಿ ಮುಟ್ಟಿಸುತ್ತಿದ್ದಾರೆ.
ಚಿಕ್ಕಮಂಗಳೂರು, ಚಿತ್ರದುರ್ಗ ಹಾಗೂ ಕೋಲಾರ ಭಾಗದವರೇ ಹೆಚ್ಚು ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾರೆ. ಸಾಮಾನ್ಯವಾಗಿ ಕಮೆಂಟ್ ಮಾಡಿದವರಿಗೆ ಕರೆಸಿ ವಾರ್ನಿಂಗ್ ಕೊಡಲಾಗುತ್ತಿದೆ. ಉಳಿದ ಕೆಲವರು ಐಪಿ ಅಡ್ರೆಸ್ ಬ್ಲಾಕ್ ಮಾಡಿಕೊಂಡು ಮನೆ ಬಿಟ್ಟು ಪರಾರಿಯಾಗಿದ್ದಾರೆ. ನಾರ್ಮಲ್ ಆಗಿ ಕಮೆಂಟ್ ಮಾಡಿದವರು ಈ ಬಗ್ಗೆ ಕ್ಷಮೆ ಕೇಳಿದ್ದಾರೆ. ಅರಿವಿಲ್ಲದೆ ಮೆಸೇಜ್ ಮಾಡಿದರೆ ಬಗ್ಗೆ ಕೆಲವರು ಕ್ಷಮೆ ಕೇಳಿದ್ದಾರೆ.