ಮೈಸೂರು : ಆಸ್ಪತ್ರೆ ಚಿಕಿತ್ಸಾ ಹಣಕ್ಕಾಗಿ ಗ್ರಾಮದಲ್ಲಿ ಭಿಕ್ಷೆ ಬೇಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪಘಾತದಲ್ಲಿ ಗಾಯಗೊಂಡಿದ್ದ 5 ವರ್ಷದ ಬಾಲಕಿ ಆದ್ಯಾ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆ ಹಣಕ್ಕಾಗಿ ಗ್ರಾಮದ ಯುವಕರು, ಸಂಬಂಧಿಗಳ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ. ಇದೇ ತಿಂಗಳ 2ನೇ ತಾರೀಖು ಬದನವಾಳು ಬಳಿ 2 ಬೈಕ್ ನಡುವೆ ಅಪಘಾತ ಆಗಿದ್ದು, 6 ಜನ ಗಾಯಗೊಂಡಿದ್ದರು. ಅದರಲ್ಲಿ ಒಂದೇ ಕುಟುಂಬದ ತಂದೆ ಮಹೇಶ್ (38) ತಾಯಿ ರಾಣಿ (32) ಹಾಗೂ ಮಗಳು ಆದ್ಯ (5) ಗಾಯಗೊಂಡಿದ್ರು. ಚಿಕಿತ್ಸೆ ಫಲಿಸದೇ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಆದ್ಯ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.