ಬೆಂಗಳೂರು : ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ರಾತ್ರಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಮೂವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಈ ಒಂದು ಅತ್ಯಾಚಾರ ಘಟನೆ ನಡೆದಿತ್ತು. ಸದ್ಯ ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಇನ್ನೊಬ್ಬನ ಪತ್ತೆಗೆ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.