BREAKING : ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಕೇಸ್ : ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

ಯಾದಗಿರಿ : ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಮುಖ್ಯ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ ಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಯಾದಗಿರಿ ಜಿಲ್ಲಾ ಪ್ರಧಾನ ಮತ್ತು ವಿಶೇಷ ಸತ್ರ ನ್ಯಾಯಾಲಯದಿಂದ ಈ ಒಂದು ಆದೇಶ ಬಂದಿದ್ದು, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೋ ದಾಖಲಾಗಿತ್ತು. ಇದೀಗ ನ್ಯಾಯಾಧೀಶರಾದ ಮರುಳಸಿದ್ದರಾಧ್ಯ ಅವರು, ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ ಗೊಳಿಸಿದ್ದಾರೆ.