ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಹಿಂದೂ ದೇವರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.