ಬೆಂಗಳೂರು : ಬೆಂಗಳೂರಿನ ಬೇಗೂರು ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ ಗುಂಡಿ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಶ್ವಪ್ರಿಯ ಲೇಔಟ್ ನ ಪ್ರಾಥಮಿಕ ಶಾಲೆಯೊಂದರಲ್ಲಿ ಮಕ್ಕಳು ಶೌಚಾಲಯವನ್ನು ಕ್ಲೀನ್ ಮಾಡಿಸಿರುವ ಘಟನೆ ನಡೆದಿತ್ತು. ವಿಶ್ವಪ್ರಿಯ ಲೇಔಟ್, ಬೇಗೂರು ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳ ಕೈಯಿಂದ ಮಲ ಮೂತ್ರದ ಶೌಚಾಲಯವನ್ನು ಶಿಕ್ಷಕರು ಸ್ವಚ್ಚಗೊಳಿಸಿದ್ದು, ಸ್ವಚ್ಚಗೊಳಿಸುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಶಾಲೆ ಶಾಲೆಯ ಮುಖ್ಯ ಶಿಕ್ಷಕಿ ಸಾಕಮ್ಮ ಹಾಗೂ ದೈಹಿಕ ಶಿಕ್ಷಕಿ ಸಮಿತ್ರಾ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆಯ ಡಿಡಿ ಅವರು ಆದೇಶ ಹೊರಡಿಸಿದ್ದಾರೆ.