ಬೆಂಗಳೂರು : ಜಮ್ಮು ಕಾಶ್ಮೀರದ ಹಲ್ಗಾಂನಲ್ಲಿ ಉಗ್ರರ ದಾಳಿಗೆ 26 ಅಮಾಯಕರು ಬಲಿಯಾಗಿದ್ದಾರೆ. ಇದಕ್ಕೆ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪ್ರತಿಕಾರ ತೀರಿಸಿಕೊಂಡಿದೆ. ಅದಾದ ಮೇಲೆ ನಮ್ಮಲ್ಲೆ ಕಲಾ ಕಿಡಿಗೇಡಿಗಳು ಪಾಕಿಸ್ತಾನದ ಪರವಾಗಿ ಕೋಡಿಯ ಮೇಲೆ ಬರಹ ಬರೆಯುವುದು ಪಾಕಿಸ್ತಾನದ ಪರ ಘೋಷಣೆ ಕೂಗುವುದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದು ನಡೆದಿತ್ತು.
ಇದೀಗ ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಶಿವಕುಮಾರ್ ಗುಣಾರೆ ಅವರು ಪ್ರತಿಕ್ರಿಯೆ ನೀಡಿ, ವೈಟ್ ಫೀಲ್ಡ್ ವ್ಯಾಪ್ತಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರ ಕುರಿತು ನಮಗೆ ರಾತ್ರಿ 11 ಗಂಟೆಗೆ ಕರೆ ಮಾಡಿ ದೂರು ನೀಡಲಾಗಿದೆ. ದೂರು ಆಧರಿಸಿ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ.
ಛತ್ತೀಸ್ಗಡ ಮೂಲದ ಆರೋಪಿ ಪಿಜಿಯಲ್ಲಿ ನೆಲೆಸಿದ್ದ. ಬಂಧಿತ ಆರೋಪಿ ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಪಿಜಿ ಗ್ಯಾಲರಿಯಲ್ಲಿದ್ದ ಇಬ್ಬರ ಪೈಕಿ ಓರ್ವ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಾನೆ. ಈ ಬಗ್ಗೆ ಎದುರು ಪಿಜಿಯಲ್ಲಿದ್ದ ವ್ಯಕ್ತಿ ಮಾಹಿತಿ ನೀಡಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಪ್ರಕರಣದ ಕಲಿಸಿಕೊಂಡು ತನಿಖೆ ಮುಂದುವರಿಸಿದ್ದೇವೆ ಎಂದು ಬೆಂಗಳೂರಿನ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಶಿವಕುಮಾರ್ ಗುಣಾರೆ ತಿಳಿಸಿದರು.