ಚಿತ್ರದುರ್ಗ : ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ಪ್ರಕರಣ ದಾಖಲಾಗಿದೆ.
ಏಪ್ರಿಲ್ ೨೨ ರಂದು ಚಿತ್ರದುರ್ಗದ ಪ್ರವಾಸಿ ಮಂದಿರದ ಬಳಿ ನೇಹಾ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಗೋವಿಂದ್ ಕಾರಜೋಳ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಚಿತ್ರದುರ್ಗ ಚುನಾವಣಾಧಿಕಾರಿಗಳು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.