ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ಅವರ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಜುನಾಥ್ ಎಂಬುವರು ವಕೀಲ ಜಗದೀಶ್ ವಿರುದ್ಧ ದೂರು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಜಾತಿ ಆಧಾರಿತ ಪ್ರಚೋದನಕಾರಿ ಮಾತುಗಳನ್ನಾಡಿ ಸಮಾಜದಲ್ಲಿ ಅಶಾಂತಿ ಮೂಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 196 ಮತ್ತು 299 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.