ನವದೆಹಲಿ : ರಾಜ್ಯದಲ್ಲಿ ಜಾತಿ ಗಣತಿ ವರದಿ ಜಾರಿ ಸಂಬಂಧ ಈಗಾಗಲೇ ಸಂಪುಟದಲ್ಲಿ ಹಲವು ಬಾರಿ ಚರ್ಚೆಯಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ಸಮೀಕ್ಷೆ ನಡೆಸಿ 9ರಿಂದ 10 ವರ್ಷಗಳಾಗಿದೆ. ಹಾಗಾಗಿ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಾವು ಒಪ್ಪಿಕೊಂಡಿದ್ದು, 90 ದಿನಗಳಲ್ಲಿ ಜಾತಿ ಗಣತಿ ಸಮೀಕ್ಷೆ ಮುಗಿಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಡಿಸಿಎಂ ಜೊತೆಗೆ ರಾಹುಲ್ ಗಾಂಧಿ ಸಭೆ ಮಾಡಿದ ವಿಚಾರವಾಗಿ, ರಾಜ್ಯದಲ್ಲಿ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದರು. ಮುಖ್ಯವಾಗಿ ಜಾತಿಗಣತಿಯ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆ ಆಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಹೇಳಿದ್ದಾರೆ. ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿ ಗಣತಿ ಸಮೀಕ್ಷೆ ಮುಗಿಯಲಿದೆ ಎಂದು ದೆಹಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.