ಕೊಪ್ಪಳ : ರಾತ್ರೋರಾತ್ರಿ ದಲಿತರ ಮನೆಗೆ ಸವರ್ಣೀಯರು ಬೆಂಕಿ ಹಚ್ಚಿದ್ದಾರೆ. ಕಿಡಿಗೇಡಿಗಳ ಬೆಂಕಿ ಕೆನ್ನಾಲಿಗೆಗೆ ಇಡೀ ಮನೆ ಹೊತ್ತಿ ಉರಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ದಲಿತ ಸಮುದಾಯದ ಮೌನೇಶ ಕೊಡಗುಂಟಿ ಮನೆಗೆ ಸವರ್ಣೀಯರು ಬೆಂಕಿ ಇಟ್ಟಿದ್ದಾರೆ. ಸದ್ಯಕ್ಕೆ ಕೋನ ಸಾಗರಕ್ಕೆ ಕೊಪ್ಪಳ ಎಸ್ಪಿ ರಾಮ್ ಭೇಟಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಈ ಒಂದು ಘಟನೆ ನಡೆದಿದ್ದು 2 ರಿಂದ 3ಗಂಟೆ ಸುಮಾರಿಗೆ ಸವರ್ಣಿಯರು ಬಂದು ಬೆಂಕಿ ಹಚ್ಚಿದ್ದಾರೆ ಎಂದು ಮೌನೇಶ್ ಆರೋಪಿಸಿದ್ದಾರೆ. ಹಳೆಯ ದ್ವೇಷಕ್ಕೆ ಈ ಒಂದು ಘಟನೆ ನಡೆದಿದ್ದು ದಲಿತರು ಮತ್ತು ಸವರ್ಣೀಯರ ನಡುವೆ ಈ ಹಿಂದೆ ಗಲಾಟೆ ನಡೆದಿತ್ತು. ಹಾಗಾಗಿ ಹಳೆ ದ್ವೇಷ ಇಟ್ಟುಕೊಂಡು ಸವರ್ಣಿಯರು ಮನೆಗೆ ಬೆಂಕಿ ಇಟ್ಟಿದ್ದಾರೆ ಎಂದು ಮೌನೇಶ್ ಆರೋಪಿಸಿದ್ದಾರೆ.