ಚೆನ್ನೈ : ಕಾವೇರಿ ನೀರು ಹರಿಸುವ ಸಂಬಂಧ ತಮಿಳುನಾಡು ಸರ್ಕಾರ ನಾಳೆ ಮಹತ್ವದ ಸಭೆ ನಡೆಸಲಿದ್ದು, ಜಲಸಂಪನ್ಮೂಲ ಸಚಿವ ದೊರೈಮುರುಗನ್ ಸರ್ವಪಕ್ಷ ಸಭೆ ಕರೆದಿದ್ದಾರೆ.
ನಾಳೆ ಚೆನ್ನೈನಲ್ಲಿ ಕಾವೇರಿ ನೀರು ಹಂಚಿಕೆ ಸಂಬಂಧ ಸರ್ವಪಕ್ಷ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ ಎಂದು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ತಿಳಿಸಿದ್ದಾರೆ.
ತಮಿಳುನಾಡಿಗೆ ನಿತ್ಯ ಒಂದು ಟಿಎಂಸಿ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಸೂಚನೆ ನೀಡಿತ್ತು. ಆದರೆ ರಾಜ್ಯ ಸರ್ಕಾರವು ನಿನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡಿಗೆ ಒಂದು ಟಿಎಂಸಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ.