ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ CBI ಐವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದೆ.
ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಇದೀಗ ಸಿಬಿಐ ಅಧಿಕಾರಿಗಳು FIR ದಾಖಲಿಸಿಕೊಂಡಿದ್ದಾರೆ. ಬ್ಯಾಂಕಿನ ಮೂರು ಅಧಿಕಾರಿಗಳು ಸೇರಿ ಐವರ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಪೂರ್ವ ವಲಯದ ಡಿಜಿಎ ಜೆ. ಮಹೇಶ್ ಎಂಬುವವರು ದೂರು ನೀಡಿದ್ದಾರೆ.
ಜೆ.ಮಹೇಶ್ ದೂರಿನ ಮೇರೆಗೆ ಸಿಬಿಐ ಇದೀಗ ಐವರ ವಿರುದ್ಧ ಕೇಸ್ ದಾಖಲಿಸಿದೆ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳು ಖಾಸಗಿ ವ್ಯಕ್ತಿಗಳು ಶಾಮಿಲಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಕೆಲವು ದಿನಗಳ ಇದೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ನಿಗಮದಿಂದ 187 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ.ಅಲ್ಲದೆ ಇದರಲ್ಲಿ ಸಚಿವ ನಾಗೇಂದ್ರ ಅವರು ಹೆಸರು ಕೇಳಿ ಬಂದಿದ್ದರಿಂದ ಈ ಒಂದು ಪ್ರಕರಣ ಇದೀಗ ಸಿಬಿಐ ತನಿಖೆ ಮಾಡುತ್ತಿದೆ.