ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಮನೆ ಮೇಲೆ ಇಂದು ‘ED’ (ಜಾರಿ ನಿರ್ದೇಶನಾಲಯ) ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಈ ಒಂದು ಪ್ರಕರಣಕ್ಕೆ ಸಿಬಿಐ ಎಂಟ್ರಿ ಆಗಿದ್ದು, ಇದೀಗ ನಟಿ ರನ್ಯಾ ರಾವ್ ವಿರುದ್ಧ FIR ದಾಖಲಿಸಿಕೊಂಡಿದೆ.
ಹೌದು ನಟಿ ರನ್ಯಾ ರಾವ್ ಗೋಲ್ಡ್ ಮಾಗಲಿ ಪ್ರಕರಣದಲ್ಲಿ ಸಿಬಿಐ ಎಂಟ್ರಿ ಕೊಟ್ಟಿದ್ದು, ಸಿಬಿಐ ಪ್ರಧಾನ ಕಚೇರಿಯಲ್ಲಿ ಸಿಬಿಐ FIR ದಾಖಲಿಸಿದೆ. DRI ಅಧಿಕಾರಿಗಳ ದೂರು ಆಧರಿಸಿ ಸಿಬಿಐ FIR ದಾಖಲಿಸಿಕೊಂಡಿದೆ. ದೇಶಕ್ಕೆ ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ ಹಿನ್ನೆಲೆಯಲ್ಲಿ FIR ದಾಖಲಾಗಿದೆ. ಬೆಂಗಳೂರು ಮತ್ತು ಮುಂಬೈಗೆ ಅಕ್ರಮವಾಗಿ ಚಿನ್ನ ಸಾಗಾಟ ಹಿನ್ನೆಲೆಯಲ್ಲಿ FIR ದಾಖಲಾಗಿದೆ.