ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳಲ್ಪಟ್ಟ ಸುಮಾರು 12 ಬಾಲಕಿಯರನ್ನು ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸರು ರಕ್ಷಿಸಿದ್ದಾರೆ. ಕರ್ನಾಟಕ ರಾಜ್ಯ ಸೇರಿದಂತೆ ಪಂಜಾಬ್ ಮಹಾರಾಷ್ಟ್ರ ತಿಪುರ ಹಾಗೂ ನೆರೆಯ ಬಾಂಗ್ಲಾದೇಶದ ಬಾಲಕಿಯರನ್ನು ರಕ್ಷಿಸಲಾಗಿದೆ.
ಹೌದು ಕಳೆದ ಮೇ ತಿಂಗಳಿನಿಂದ i ಎನ್‌ಜಿಓ ಸಹಯೋಗದೊಂದಿಗೆ ಸಿಸಿಬಿ ಸುಮಾರು 11 ಕಡೆಗೆ ದಾಳಿ ಮಾಡಿದ್ದರು. ಈ ವೇಳೆ ಸುಮಾರು ವೇಶ್ಯಾವಾಟಿಕೆ ದಂಧೆಗೆ ತಳಲ್ಪಟ್ಟಿದ್ದ 14 ರಿಂದ 17 ವರ್ಷದ ವಯಸ್ಸಿನ 12 ಬಾಲಕಿಯರನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ಸ್ಥಳೀಯ ಬಾಲಕಿಯರು, ತ್ರಿಪುರಾ, ಮಹಾರಾಷ್ಟ್ರ, ಪಂಜಾಬ್ ರಾಜ್ಯಗಳ ತಲಾ ಒಬ್ಬರು, ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಮೂಲದ ತಲಾ ಮೂವರು ಸೇರಿದಂತೆ ಒಟ್ಟು 12 ಬಾಲಕಿಯರನ್ನು ರಕ್ಷಿಸಲಾಗಿದೆ.
ದಾಳಿಯ ಬಳಿಕ ಸರ್ಕಾರೆತರ ಸಂಸ್ಥೆಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಬಾಲಕಿಯರಿಗೆ ಮನೋ ಚಿಕಿತ್ಸೆ ಮತ್ತು ಪುನರ್ವಸತಿ ಕಲ್ಪಿಸಲಾಗಿದೆ. ವಿದೇಶಿ ಮೂಲದ ಪ್ರಜೆಯೆಂದು ದೃಢಪಟ್ಟ ಬಾಲಕಿಯರನ್ನು ಅವರ ದೇಶಗಳಿಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.