ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಇಂದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಿಸಿಬಿ ದಾಳಿ ವೇಳೆ ಅಪಾರ ಪ್ರಮಾಣದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.
ದಾಳಿ ವೇಳೆ ಕಸೂರಿ ಮೇತಿ ಸೊಪ್ಪಿ, ಬೀಡಿ ಪ್ಯಾಕೇಟ್, ಗಾಂಜಾ ಚಿಲ್ಲಮ್, ಮೊಳೆಗಳು, ಹರಿತವಾದ ವಸ್ತುಗಳು, ಗುಟ್ಕಾ ಪ್ಯಾಕೇಟ್ ಗಳು ಪತ್ತೆಯಾಗಿವೆ. ಸುಣ್ಣದ ಡಬ್ಬಿ, ಡೈರಿಗಳು, ಚಾಕುಗಳು, ನಗದು ಹಣ, ಮೊಬೈಲ್ ಚಾರ್ಜರ್, ಕತ್ತರಿ, ಕಬ್ಬಿಣದ ರಾಡಡ್ ಗಳು ಪತ್ತೆಯಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.