ಬೆಂಗಳೂರು : ಅಕ್ರಮ ಚಟುವಟಿಕೆಗಳ ಮಾಹಿತಿ ಹಿನ್ನೆಲೆಯಲ್ಲಿ ಸಿಸಿಬಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಮಂಗಳವಾರ ನಸುಕಿನಲ್ಲಿ 3.30 ಗಂಟೆಗೆ ದಿಢೀರ್ ದಾಳಿ ನಡೆಸಿದೆ.ನಾಲ್ಕು ತಾಸಿಗೂ ಅಧಿಕ ಹೊತ್ತು ಜೈಲಿನಲ್ಲಿ ಜಾಲಾಡಿ ಅಲ್ಪ ಪ್ರಮಾಣದ ನಗದು ಹಾಗೂ ಚೂರಿಗಳನ್ನು ಸಿಸಿಬಿ ಜಪ್ತಿ ಮಾಡಿದೆ.

ಅಕ್ರಮ ಚಟುವಟಿಕೆ ಶಂಕೆ ಮೇರೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಮಂಗಳವಾರ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿ ಸಿಸಿಬಿ ಶೋಧ ನಡೆಸಿದೆ. ಈ ವೇಳೆ ರೂ.40,000 ನಗದು ಹಾಗೂ ಮೂರು ಚಾಕುಗಳು ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀದಯಾನಂದ ಸುದ್ದಿಗಾರರೊಂದಿಗೆ ಮಾತನಾಡಿ,ಕೇಂದ್ರ ಕಾರಾಗೃಹದಲ್ಲಿ ದಿಢೀರ್‌ ತಪಾಸಣೆ ನಡೆಸಿ ₹40 ಸಾವಿರ ನಗದು ಹಾಗೂ ಮೂರು ಚಾಕುಗಳನ್ನು ಸಿಸಿಬಿ ಜಪ್ತಿ ಮಾಡಿದೆ. ಈ ಹಣ ಹಾಗೂ ಚಾಕು ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುತ್ತದೆ. ಅಕ್ರಮ ಚಟುವಟಿಕೆಗಳ ಶಂಕೆ ಮೇರೆಗೆ ಜೈಲು ತಪಾಸಣೆ ನಡೆಸಲಾಗಿದೆ ಎಂದು ಹೇಳಿದರು.

Share.
Exit mobile version