ನವದೆಹಲಿ ; ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಜಮ್ಮುಕಾಶ್ಮೀರದಲ್ಲಿ ಕೆಲಸ ಮಾಡುತ್ತಿರುವ ಹಿಂದೂ ಸರ್ಕಾರಿ ನೌಕರರು ವರ್ಕ್ ಫ್ರಂ ಹೋಂ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಹೌದು, ಜಮ್ಮು ಮತ್ತು ಕಾಶ್ಮೀರ ರಾಜ್ಯದ ಅನಂತ್ ನಾಗ್ ಹಾಗೂ ಬಾರಾಮುಲ್ಲಾ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಈ ಎರಡು ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿರುವ ಹಿಂದೂ ಸರ್ಕಾರಿ ನೌಕರರು ಏಪ್ರಿಲ್ 27 ರವರೆಗೆ ವರ್ಕ್ ಫ್ರಂ ಹೋಂ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.