ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಜಯಣ್ಣ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಎಸ್. ಜಯಣ್ಣ ಅವರನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲು ಹೋಗುವಾಗ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಉಗ್ರಾಣ ನಿಗಮದ ಅಧ್ಯಕ್ಷರಾಗಿರುವ ಎಸ್. ಜಯಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಇಂದು ಸಂಜೆ ಅಥವಾ ನಾಳೆ ಜಯಣ್ಣ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.