ಚಾಮರಾಜನಗರ : ಚಾಮರಾಜನಗರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕಬ್ಬಿನ ಗದ್ದೆಯಲ್ಲಿ ಆಟ ಆಡುತ್ತಿರುವಾಗ ಎರಡು ವರ್ಷದ ಬಾಲಕನಿಗೆ ಹಾವು ಕಚ್ಚಿ ಧಾರಣವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಶ್ರೀಧರ್ ಎಂಬವರ ಪುತ್ರ ಅಜಯ್ (2) ಎನ್ನುವ ಬಾಲಕ ಹಾವು ಕಚ್ಚಿ ಮೃತಪಟ್ಟಿದ್ದಾನೆ. ಶ್ರೀಧರ್ ಕುಟುಂಬಸ್ಥರು ಪ್ರತಿವರ್ಷ ತಮ್ಮ ಜಿಲ್ಲೆಯಿಂದ ಕಬ್ಬು ಕಟಾವು ಮಾಡಲು ಎರಡು ಮೂರು ತಿಂಗಳುಗಳ ಕಾಲ ಕುಟುಂಬ ಸಮೇತರಾಗಿ ಬಂದು ಇಲ್ಲೇ ವಾಸ್ತವ್ಯ ಹೂಡಿ, ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಅದೇ ರೀತಿಯಾಗಿ ಸುಮಾರು ನಾಲ್ಕರಿಂದ ಐದು ಕುಟುಂಬದವರು ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿ ಗ್ರಾಮದ ಕುಳ್ಳೇಗೌಡ ಎಂಬವರ ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದರು. ಈ ವೇಳೆ ಮೃತಪಟ್ಟ ಮಗು ಸೇರಿ 4-5 ಮಕ್ಕಳು ಕಬ್ಬಿನ ಗದ್ದೆಯಲ್ಲೇ ಆಟವಾಡುತ್ತಿದ್ದರು. ಈ ವೇಳೆ ಬಾಲಕ ಅಜಯನಿಗೆ ಹಾವು ಕಚ್ಚಿದೆ ಕೂಡಲೇ ಆದ ಜೋರಾಗಿ ಕಿರುಚಿಕೊಂಡಿದ್ದಾನೆ.
ತಕ್ಷಣ ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಕಾಮಗೆರೆ ಗ್ರಾಮದ ಹೋಲಿ ಕ್ರಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.