BREAKING : ಚಾಮರಾಜನಗರದಲ್ಲಿ ಘೋರ ದುರಂತ : ಕಾರಿನ ಮೇಲೆ ಕಬ್ಬಿನ ಲಾರಿ ಬಿದು ಮೂವರು ಸ್ಥಳದಲ್ಲೇ ಸಾವು

ಚಾಮರಾಜನಗರ : ಚಾಮರಾಜನಗರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಾರಿನ ಮೇಲೆ ಕಬ್ಬು ತುಂಬಿದ್ದ ಲಾರಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರದ ಸಿಂಬಂನ 27 ನೇ ತಿರುವಿನಲ್ಲಿ ಕಬ್ಬು ತುಂಬಿಕೊಂಡು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಸನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.