ಮೈಸೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಇಂದು ಚಾಮುಂಡಿ ಚಲೋ ಹೋರಾಟ ಹಮ್ಮಿಕೊಂಡಿದೆ.
ಚಾಮುಂಡಿ ಚಲೋ ಪ್ರತಿಭಟನೆ ಆರಂಭವಾಗುತ್ತಿದ್ದಂತೆಯೇ ಪೊಲೀಸರು ಬಿಜೆಪಿ ಶಾಸಕ ಶ್ರೀವತ್ಸ ಹಾಗೂ ಹಲವು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ. ಚಾಮುಂಡಿ ಚಲೋ ಹೋರಾಟದಲ್ಲಿ ಭಾಗಿಯಾಗಲು ಆಗಮಿಸಿದ್ದ ಹಿಂದೂ ಜಾಗರಣಾ ವೇದಿಕೆ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಜಿ ಶಾಸಕ ಎಲ್.ನಾಗೇಂದ್ರ, ಮಾಜಿ ಮೇಯರ್ ಸಂದೇಶ ಸ್ವಾಮಿ ನೇತೃತ್ವದಲ್ಲಿ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಚಾಮುಂಡಿ ಬೆಟ್ಟದತ್ತ ತೆರಳಿದ್ದರು. ಈ ವೇಳೆ ಪೊಲೀಸರು ಬೆಟ್ಟಕ್ಕೆ ತೆರಳಲು ಬಿಡದೇ ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರಾದ ಗಿರಿಧರ್, ದಿನೇಶ್, ಕುಂಬ್ರಳ್ಳಿ ಸುಬ್ಬಣ್ಣ, ರೇಣುಕಾ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದಿದ್ದಾರೆ.