ಬೆಂಗಳೂರು : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂಬ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇಚಂದ್ರಶೇಖರನಾಥ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸ್ವಾಮೀಜಿ, ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರಿಗೆ ಮತದಾನದ ಹಕ್ಕು ರದ್ದುಪಡಿಸಬೇಕು ಎಂಬ ನನ್ನ ಹೇಳಿಕೆ ಚರ್ಚೆಗೆ ಕಾರಣವಗಿದೆ. ಬಾಯಿತಪ್ಪಿನಿಂದ ನೀಡಿರುವ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಿಸಾನ್ ಸಂಘಟನೆ ನಡೆಸಿದ ಪ್ರತಿಭಟನೆಯಲ್ಲಿ ಚಂದ್ರಶೇಖರ ಸ್ವಾಮೀಜಿಯೂ ಪಾಲ್ಗೊಂಡಿದ್ದರು. ಈ ವೇಳೆ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ, ವಕ್ಫ್ ಬೋರ್ಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಪಾಕಿಸ್ತಾನ ರೀತಿಯಲ್ಲಿ ಭಾರತದಲ್ಲೂ ಕಾನೂನು ಜಾರಿಯಾಗಬೇಕು. ಭಾರತದಲ್ಲಿ ಮುಸ್ಲಿಮರಿಗೆ ಮತ ಚಲಾಯಿಸುವ ಹಕ್ಕನ್ನ ರದ್ದು ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ.
ಹೌದು ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಎಲ್ಲರೂ ಸೇರಿ ದೇಶದಲ್ಲಿ ವಕ್ಫ್ ಮಂಡಳಿಗೆ ಇಲ್ಲದಂತೆ ಮಾಡಬೇಕು. ರೈತರ ಪರವಾಗಿ ಜಮೀನು ಉಳಿಸಲು ಬೇಕಾದ ಹೋರಾಟವನ್ನು ಮಾಡೋಣ. ಸರ್ಕಾರ ಬಿದ್ದು ಹೋದರು ಪರವಾಗಿಲ್ಲ ನಾವೆಲ್ಲರೂ ಹೋರಾಡೋಣ. ಎಂದು ಬೆಂಗಳೂರಿನಲ್ಲಿ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ನೀಡಿದರು.